ಸುದ್ದಿ ಕಣಜ.ಕಾಂ
ಬೆಂಗಳೂರು: ಐಟಿಐ (ಇಂಡಸ್ಟ್ರೀಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪರೀಕ್ಷಾ ಗುಣಮಟ್ಟ ಹೆಚ್ಚಿಸುವುದೂ ಸೇರಿ ವಿವಿಧ ಕಾರಣಗಳಿಂದಾಗಿ ಪರೀಕ್ಷೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರ ಸಮಕ್ಷಮದಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಸಹಿ ಹಾಕಿ ಒಪ್ಪಿಗೆ ಸೂಚಿಸಿದ್ದಾರೆ.
ಕೈಗಾರಿಕಾ ತರಬೇತಿ ಇಲಾಖೆಯ ಸಹಕಾರದೊಂದಿಗೆ ಪರೀಕ್ಷೆ ಪ್ರವೇಶ ಪತ್ರಗಳ ಮುದ್ರಣ, ಪಟ್ಟಿ ಸಂಖ್ಯೆಗಳ ಮುದ್ರಣ, ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದು, ಆಯಾ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಇತ್ಯಾದಿ ಕಾರ್ಯಗಳನ್ನು ಪರೀಕ್ಷಾ ಪ್ರಾಧಿಕಾರವೇ ಮಾಡಲಿದೆ.
– ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಡಿಸಿಎಂ
ಒಪ್ಪಂದದಲ್ಲಿ ಏನಿದೆ?: ಐಟಿಐ ಪರೀಕ್ಷೆಗಳನ್ನು ರಾಜ್ಯ ವೃತ್ತಿಪರ ತರಬೇತಿ ಸಂಸ್ಥೆಯ ಬದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ನಡೆಸುವುದು ಒಪ್ಪಂದದ ಉದ್ದೇಶವಾಗಿದೆ. ಇದಕ್ಕೆ ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್ ಕೂಡ ಸಹಿ ಹಾಕಿದ್ದಾರೆ. ಉಪ ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ಕಡತಗಳನ್ನು ವಿನಿಮಯ ಮಾಡಲಾಗಿದೆ.