ಸುದ್ದಿ ಕಣಜ.ಕಾಂ
ಶಂಕರಘಟ್ಟ (ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಘಟಕ ಕಾಲೇಜಿನಲ್ಲಿ 2020-21ನೇ ಸಾಲಿನಿಂದ ಸ್ನಾತಕೋತ್ತರ ಭೌತಶಾಸ್ತ್ರ ಪದವಿ ಕೋರ್ಸ್ ಪ್ರಾರಂಭವಾಗಲಿದೆ. ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ELECTION INFOGRAPHY NEWS | ಓಟಿಂಗ್ನಲ್ಲಿ ಬೆಳಗ್ಗೆಯಿಂದ ಮುಂದಿದ್ದ ತೀರ್ಥಹಳ್ಳಿ ಸಂಜೆ ಹೊತ್ತಿಗೆ ಹಿಂದೆ
ಅರ್ಜಿ ಶುಲ್ಕವೆಷ್ಟು: ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಲ್ಲಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಸಾಮಾನ್ಯ ವಿದ್ಯಾರ್ಥಿಗಳಿಗೆ 500 ರೂಪಾಯಿ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ವಿಶ್ವವಿದ್ಯಾಲಯದ ಸ್ನಾತಕೋತ್ತರ ಭೌತಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷರಿಗೆ ಜನವರಿ 2ರೊಳಗೆ ಸಲ್ಲಿಸಬಹುದು.
ಜನವರಿ 5ರಂದು ಕೌನ್ಸೆಲಿಂಗ್: ಈ ಹಿಂದಿನ ಪ್ರವೇಶಾತಿ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಸಲ್ಲಿಸುವ ಅಗತ್ಯ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳಿಗೆ ಜನವರಿ 5ರಂದು ಜ್ಞಾನ ಸಹ್ಯಾದ್ರಿಯ ಭೌತಶಾಸ್ತ್ರ ವಿಭಾಗದಲ್ಲಿ ಕೌನ್ಸೆಲಿಂಗ್ ಮೂಲಕ ನಿಯಮಾನುಸಾರ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ. ಗೋವಿಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.