ಸುದ್ದಿ ಕಣಜ.ಕಾಂ ಬೆಂಗಳೂರು: ಗುರುವಾರ ರಾತ್ರಿಯಿಂದ ಜಾರಿಯಾಗಬೇಕಿದ್ದ ರಾತ್ರಿ ಕಫ್ರ್ಯೂ ಅನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಅಭಿಪ್ರಾಯ ಹಿನ್ನೆಲೆ ಕಫ್ರ್ಯೂ ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರದ ಕೊರೊನಾ ವೈರಸ್ ಹರಡುವಿಕೆ ತಡೆಗೆ ತಜ್ಞರ ಸಲಹೆಯಂತೆ ನೈಟ್ ಕಫ್ರ್ಯೂ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂ ಅಗತ್ಯ ಇಲ್ಲವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ, ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮನಗಂಡು ಕಫ್ರ್ಯೂ ಕೈಬಿಡಲಾಗಿದೆ.
ಸ್ವಯಂ ನಿರ್ಬಂಧಕ್ಕೆ ಮನವಿ: ಕೊರೊನಾ ವಿರುದ್ಧ ಜಯಿಸಲು ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆ ಹಲವೆಡೆ ಅನಾಹುತಗಳನ್ನು ಸೃಷ್ಟಿಸಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ರಸ್ತೆಗಖು ಜಲಾವೃತಗೊಂಡಿದ್ದವು. ಅಕ್ಕಪಕ್ಕ ನಿಲ್ಲಿಸಿದ ವಾಹನಗಳು ನೀರಿನಲ್ಲಿ ಮುಳುಗಿದ ಘಟನೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎನ್.ಟಿ.ರಸ್ತೆಯ ಸುಂದರಾಶ್ರಯ ಲಾಡ್ಜ್ ಎದುರು ಇತ್ತೀಚೆಗೆ ನಡೆದ ಕೊಲೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ । ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಮರ್ಡರ್, ಇಬ್ಬರು […]
ಸುದ್ದಿ ಕಣಜ.ಕಾಂ ಭದ್ರಾವತಿ: ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಸಹೋದರ ಬಿ.ಕೆ.ಮೋಹನ್ ಅವರ ಮೇಲೆಯೂ ಪ್ರಕರಣ ದಾಖಲಿಸಿರುವುದನ್ನು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ.ವೀರಭದ್ರಪ್ಪಗೌಡ ಖಂಡಿಸಿದರು. […]