ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಿದ ಒಂದು ಗಂಟೆಯೊಳಗೆ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಇವುಗಳ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಈ ವರ್ಷ 40 ಕೋಟಿ ರೂಪಾಯಿ ವ್ಯವಹಾರ ನಡೆಸಲಾಗಿದೆ. ನೌಕರರಿಗಾಗಿ 22 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಜನವರಿ 1ರಿಂದ ಕೆಜಿಐಡಿ ಸಂಪೂರ್ಣ ಗಣಕೀಕರಣಗೊಳ್ಳಲಿದೆ. ಕೇಂದ್ರದ ಮಾದರಿಯ ವೇತನವನ್ನು ಮುಂದಿನ ದಿನಗಳಲ್ಲಿ ಪಡೆದೇ ಪಡೆಯುತ್ತೇವೆ. ಅಲ್ಲದೆ ಎನ್ಪಿಎಸ್ನ್ನು ರದ್ದುಗೊಳಿಸುವ ನಿಟ್ಟಿಲ್ಲಿ ಸರ್ಕಾರದೊಂದಿಗೆ ಮಾತುಕತೆ ನಡೆದಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಕಣಜ.ಕಾಂ | DISTRICT | COURT NEWS ಶಿವಮೊಗ್ಗ: ನಗರದ 9 ವರ್ಷದ ಬಾಲಕಿಯೊಬ್ಬಳು ಬೆಂಕಿಪೊಟ್ಟಣ ಕೇಳಿಕೊಂಡು ಬಂದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 5 ವರ್ಷ ಕಠಿಣ […]
ಸುದ್ದಿ ಕಣಜ.ಕಾಂ | KARNATAKA | MARKET TREND ಬೆಂಗಳೂರು: ಬಂಗಾರದ ಬೆಲೆಯು ಪ್ರತಿ 10 ಗ್ರಾಂ ಅಪರಂಜಿಗೆ 320 ರೂ. ಇಳಿಕೆಯಾಗಿದೆ. ನಿರಂತರ ಏರಿಕೆ ಕಾಣುತ್ತಿದ್ದ ಬೆಲೆಗೆ ಕಳೆದ ಎರಡು ದಿನಗಳಿಂದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪರಿಸರ ಮತ್ತು ವನ್ಯಜೀವಿಗಳ ಸೂಕ್ಷ್ಮ ಪ್ರದೇಶವಾದ ಆಗುಂಬೆಯಲ್ಲಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಆಗುಂಬೆ ಘಾಟಿ ಅಪರೂಪದ ಪ್ರಾಣಿ ಸಿಂಗಳಿಕ (ಎಲ್.ಟಿ.ಎಂ) ಸೇರಿದಂತೆ ಹಲವು ಪ್ರಾಣಿಗಳನ್ನು […]