ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಧಿಯಾಟ ನೋಡಿ ಎಷ್ಟು ಕ್ರೂರವಾಗಿದೆ. ನವೆಂಬರ್ 29ರಂದು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಭಾರಿ ಕ್ರೀಯಾಶೀಲತೆಯಿಂದ ಪಾಲ್ಗೊಂಡಿದ್ದರು.
ಆದರೆ, ಬರೋಬ್ಬರಿ ಒಂದು ತಿಂಗಳ ಬಳಿಕ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದ ಮರಣೋತ್ತರ ಪರೀಕ್ಷೆಗಾಗಿ ಅವರ ಪಾರ್ಥೀವ ಶರೀರವನ್ನು ತರಲಾಗಿದೆ.
ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ, ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ
ಕಳೆದ ತಿಂಗಳು ನಗರದ ವಿಜ್ಞಾನ ಕಾಲೇಜಿನ ವಿಸ್ತರಣ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜು ಪ್ರವೇಶ ದ್ವಾರ ಮತ್ತು ಹಾಸ್ಟೆಲ್ ವಿಸ್ತರಣ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಉಪ ಸಭಾಪತಿಗಳು ಭಾಗವಹಿಸಿದ್ದರು.