ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 2 ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.15 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ನಂತರ ರಾತ್ರಿ 8ಕ್ಕೆ ಶಿವಮೊಗ್ಗ ಸಾಗರ ರಸ್ತೆಯಲ್ಲಿರುವ ಹೋಟೆಲ್ ಹರ್ಷ ದಿ ಫರ್ನ್ನಲ್ಲಿ ಏರ್ಪಡಿಸಲಾಗಿರುವ ಬಿ.ಜೆ.ಪಿ. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಹಳಿ ತಪ್ಪಿದ ರೈಲು ಪ್ರಯಾಣಿಕರ ಹಣ ರೀಫಂಡ್
3 ರಂದು ಬೆಳಗ್ಗೆ 10.30 ಗಂಟೆಗೆ ಶಿವಮೊಗ್ಗದ ಸಾಗರ ರಸ್ತೆಯ ಪಿ.ಇ.ಎಸ್. ಎಂಜಿನಿಯರಿಂಗ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿರುವ ಬಿಜೆಪಿ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.