ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆಯ ಫಲವಾಗಿಯೇ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಈಶ್ವರಪ್ಪ ಅವರು, ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡಿದೆ. ಹೀಗಿದ್ದರೂ ಸಿದ್ದರಾಮಯ್ಯ ಅವರು ತಾನೇ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಗಮನಿಸಿದರೆ ಪಕ್ಷದಲ್ಲಿ ಅವರಿಗೆ ಕೇಳುವವರೇ ಇಲ್ಲವೇನೋ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದರು.
ಸಿಎಂ ಆಗುವ ಕನಸು ಈಡೇರದು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾಗಿ ಹಗಲಿರುಳು ಕನಸು ಕಾಣುತ್ತಿದ್ದಾರೆ. ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ, ಇದು ನನಸಾಗದು ಎಂದು ಹೇಳಿದರು.