ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಈಗಾಗಲೇ ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.
ನಗರದ ಈಡಿಗ ಭವನದಲ್ಲಿ ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಮಿತಿ, ರಾಮ ಮನೋಹರ ಲೋಹಿಯಾ ಟ್ರಸ್ಟ್ ಕಾಗೋಡು ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಬೂಮಣ್ಣಿ ಬುಟ್ಟಿ ಚಿತ್ತಾ ಸ್ಪರ್ಧೆ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಇದನ್ನೂ ಓದಿ । ಶಿವಮೊಗ್ಗದ ಏಳು ಪೊಲೀಸ್ ಠಾಣೆ ಅಪ್ಗ್ರೇಡ್, ಇದರಿಂದ ಏನು ಬದಲಾವಣೆ?
ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಲಾಗುವುದು. ಇದಕ್ಕಾಗಿ ವಿಶೇಷ ಅಧಿಕಾರಿಯನ್ನೂ ನೇಮಕ ಮಾಡಲಾಗಿದೆ. ಬರುವ ಆರೇಳು ತಿಂಗಳುಗಳಲ್ಲಿ ಸಂತ್ರಸ್ತರಿಗೆ ಜಮೀನು ಕೊಡಿಸುವುದಾಗಿ ಭರವಸೆ ನೀಡಿದರು.
ಈ ಕಾರಣಕ್ಕಾಗಿ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲಿಯೂ ಸಮಸ್ಯೆ ಬಗೆಹರಿಯದಿದ್ದರೆ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಲಾಗುವುದು. ಅಲ್ಲಿಯೂ ತಾರ್ಕಿಕ ಸಮಸ್ಯೆ ಸಿಗದಿದ್ದರೆ ಹಸಿರು ಪೀಠಕ್ಕೆ ಹೋಗಲು ಸಿದ್ಧರಿದ್ದೇವೆ. ಸರ್ಕಾರ ಮುಳುಗಡೆ ಸಂತ್ರಸ್ತರ ಪರವಾಗಿದೆ ಎಂದರು.
ರಾಮಮನೋಹರ ಲೋಹಿಯಾ ಟ್ರಸ್ಟ್ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಧೀರ ದೀವರ ಬಳಗದ ಸಂಚಾಲಕ ನಾಗರಾಜ್ ನೇರಿಗೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ , ಚಿತ್ತಾರ ಕಲಾವಿದೆ ಲಕ್ಷ್ಮಮ್ಮ ಗಡೇಮನೆ, ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಸುರೇಶ್ ಬಾಳೆಗುಂಡಿ ಉಪಸ್ಥಿತರಿದ್ದರು.