ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 19 ರಂದು ಬೆಳಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೊನಿ ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳ ಏರ್ಪಡಿಸಿದೆ.
ಇದನ್ನೂ ಓದಿ । ಲಕ್ಷಾಂತರ ಜನರಿಗೆ ಪಿಡುಗಾಗಿ ಕಾಡುತ್ತಿರುವ ಹಕ್ಕಿ ಜ್ವರ ಕಂಪ್ಲೀಟ್ ರಿಪೋರ್ಟ್
ಇವರು ಭಾಗವಹಿಸಬಹುದು: ಉದ್ಯೋಗ ಮೇಳದಲ್ಲಿ 8ನೇ ತರಗತಿ, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂಪರ್ಕಿಸಿ: ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 255293, ಮೊಬೈಲ್ 8861890866, 9036067511, 9535312531 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.