ಸುದ್ದಿ ಕಣಜ.ಕಾಂ
ಶಿಕಾರಿಪುರ: ತಲೆಮರೆಸಿಕೊಂಡಿದ್ದ ಪೋಕ್ಸೊ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನ್ಕೆಕ ಒಪ್ಪಿಸಿದ್ದಾರೆ.
ಶಿಕಾರಿಪುರ ನಿವಾಸಿ ನರಸಿಂಹ(29) ಎಂಬಾತನನ್ನು ಬಂಧಿಸಲಾಗಿದೆ. ಒಂದೂವರೆ ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.
ಪ್ರಕರಣ ಬೇಧಿಸಿದ ತಂಡ: ಆರೋಪಿಯ ಪತ್ತೆಗಾಗಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ಪಿ.ಎಸ್.ಐ ರಾಜುರೆಡ್ಡಿ ಬೆನ್ನೂರು ಅವರು ತಮ್ಮ ಠಾಣೆ ಸಿಬ್ಬಂದಿಎಚ್.ಸಿ ಆನಂದ್, ರಾಮಪ್ಪ ಅವರನ್ನು ನೇಮಕ ಮಾಡಲಾಗಿತ್ತು. ಕಾರ್ಯಾಚರಣೆ ನಡೆಸಿದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.