ಸುದ್ದಿ ಕಣಜ.ಕಾಂ
ಶಿಕಾರಿಪುರ: ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕೆ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.
ಇದನ್ನೂ ಓದಿ । ರೈತಪರ ಬಜೆಟ್ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ
ಹನಿ ನೀರಾವರಿ ಸಬ್ಸಿಡಿ ಬಿಡುಗಡೆಗೆ ಕ್ರಮ | ಹನಿ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳ್ಳಲಾಗುವುದು. ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಬೇಕು. ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರಿಗೆ ಸಬ್ಸಿಡಿ ಬಿಡುಗಡೆಗೆ ಕ್ರಮವಹಿಸಬೇಕೆಂದು ತಾಕೀತು ಮಾಡಿದರು.
ಸಂಸದ ಬಿ.ವೈ.ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯ್ಕ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್.ಪಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.