ಮುಕ್ತ ಕಂಠದಿಂದ ಯಡಿಯೂರಪ್ಪ ಅವರನ್ನು ಹೊಗಳಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಕ್ಷ ಯಾವುದೇ ಆಗಿರಲಿ. ಒಳ್ಳೆಯ ಕೆಲಸಗಳನ್ನು ಮಾಡಿದಾಗ ಹೊಗಳುವುದು ನಮ್ಮ ಧರ್ಮ. ಶಿವಮೊಗ್ಗ ಜಿಲ್ಲೆಯ ಚಿತ್ರಣ ಬದಲಾಗಿದ್ದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಎಂದು ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ಮುಕ್ತ ಕಂಠದಿಂದ ಹೊಗಳಿದರು.
ನಗರದ ರೈಲ್ವೆ ನಿಲ್ದಾಣ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಅದೆಷ್ಟೋ ಶಾಸಕರು, ಮಂತ್ರಿಗಳು, ಎಂಪಿಗಳು ಬಂದು ಹೋಗಿದ್ದಾರೆ. ನಮ್ಮನ್ನು ಕೇವಲ ಜೈಕಾರಕ್ಕಾಗಿ ಮಾತ್ರ ಬಳಸಿಕೊಂಡಿದ್ದಾರೆ. ವಿನಹ ಜಿಲ್ಲೆಯ ಅಭಿವೃದ್ಧಿ ಮಾಡಿಲ್ಲ. ಆದರೆ, ಯಡಿಯೂರಪ್ಪನವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು
ಬಾಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ | ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಎಂದರೆ, ಭದ್ರಾವತಿಯೂ ಒಳಗೊಳ್ಳಬೇಕು. ಆದರೆ, ಸಂಸದರು ಬೇರೆಡೆಗೆ ಕೊಟ್ಟಷ್ಟು ಆದ್ಯತೆ ಭದ್ರಾವತಿಗೆ ನೀಡುತ್ತಿಲ್ಲ ಎಂದು ಹೊಗಳಿಕೆಯ ಮಧ್ಯೆಯೇ ‘ಬಾಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ’ ಎಂಬ ಗಾದೆಯ ಮೂಲಕ ಸಂಸದ ರಾಘವೇಂದ್ರ ಅವರ ಕಾಲೆಳೆದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಶಾಸಕರಾದ ಆಯನೂರು ಮಂಜುನಾಥ್, ಎಸ್.ಕುಮಾರ್ ಬಂಗಾರಪ್ಪ, ಎಸ್.ರುದ್ರೇಗೌಡ, ಭಾರತಿಶೆಟ್ಟಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುವರ್ಣಶಂಕರ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮೂಲಭೂತ ಸೌಕರ್ಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕಪಿಲ್ ಮೋಹನ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಕೆ.ಪಿ.ಸ್ವಾಮಿ, ವಿಜಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್.ಪಿ. ಕೆ.ಎಂ.ಶಾಂತರಾಜು ಉಪಸ್ಥಿತರಿದ್ದರು

error: Content is protected !!