ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಸಂಖ್ಯೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
VIDEO REPORT
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು.
READ | ಬಂಪರ್ ಗಿಫ್ಟ್, ದುಡಿಯುವ ಕೈಗೆ ಕೆಲಸ, ನಿರುದ್ಯೋಗಿಗೆ ಉದ್ಯೋಗ, ಯಾವೆಲ್ಲ ಸ್ಕಿಲ್ ಟ್ರೈನಿಂಗ್ ಲಭ್ಯ?
ಹುಷಾರ್ ಬೀಳುತ್ತೆ ದಂಡ | ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯಂತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹಿಸದೆ ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 1016 ಕೇಸ್ ದಾಖಲು | ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ 1.63 ಲಕ್ಷ ರೂ. ದಂಡ ವಿಧಿಸಲಾಗಿದೆ.
ಶೇ.1.1ರಷ್ಟು ಪಾಸಿಟಿವ್ ಪ್ರಮಾಣ | ವಾರದ ಅವಧಿಯಲ್ಲಿ ತಪಾಸಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 2,200 ಜನ ಕೊರೊನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕೋವಿಡ್ ನಿಯಂತ್ರಣದಲ್ಲಿಡಬಹುದಾಗಿದೆ. ಜನರು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಿ.ಎಚ್.ಒ ಡಾ.ರಾಜೇಶ್ ಸುರಗೀಹಳ್ಳಿ ಉಪಸ್ಥಿತರಿದ್ದರು.