ಸುದ್ದಿ ಕಣಜ.ಕಾಂ
ಶಿವಮೊಗ್ಗ: ತುಮಕೂರು- ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನೆ ಅಡಿ ನಾಲ್ಕು ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ರಾಷ್ಟ್ರೀಯ ಹೆದ್ದಾರಿ 206ಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ 6,397.47 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಈ ಯೋಜನೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.