ಸುದ್ದಿ ಕಣಜ. ಕಾಂ
ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಿರ್ದೇಶನದ ಬಳಿಕವೂ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಹತ್ತು ಗಂಡೆ ಬಳಿಕ ಓಡಾಡುತ್ತಿದ್ದ 9 ದ್ವಿಚಕ್ರ ವಾಹನಗಳನ್ನು ಪೊಲೀಸ್ ಇಲಾಖೆ ಶನಿವಾರ ಸೀಜ್ ಮಾಡಿದೆ.
READ | ಶಿವಮೊಗ್ಗದಲ್ಲಿ ಹೇಗಿತ್ತು ಫಸ್ಟ್ ವೀಕೆಂಡ್ ಕರ್ಫ್ಯೂ, ಎಲ್ಲೆಲ್ಲಿ ಏನಾಯ್ತು?
ಬೆಳಗ್ಗೆ 6 ರಿಂದ 10 ಗಂಟೆಯವರೆಗಷ್ಟೇ ಓಡಾಡಲು ಅವಕಾಶ ನೀಡಲಾಗಿತ್ತು. ಆದರೆ ದ್ವಿಚಕ್ರ ವಾಹನ ಸವಾರರು ನಿಯಮಕ್ಕೆ ವಿರುದ್ಧವಾಗಿ ಯಾವುದೇ ಕಾರಣವಿಲ್ಲದೇ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ವಾಹನಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ದ್ವಿಚಕ್ರ ವಾಹನಗಳ ಸೀಜ್ ಹೊರತು ಬೇರೆಯ ಪ್ರಕರಣಗಳು ದಾಖಲಾಗಿಲ್ಲ. ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಸಹಕಾರ ದೊರಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.