ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಠ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
https://www.suddikanaja.com/2021/04/27/not-all-covid-patient-need-remdesivir/
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್ಗಳಿವೆ.
ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್ ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ರೆಮಿಡಿಸಿವರ್ ಲಭ್ಯ | ಇದುವರೆಗೆ 2,67,060 ಡೋಸ್ ಕೋವಿಶೀಲ್ಡ್ ನೀಡಲಾಗಿದ್ದು, 2,540 ಡೋಸ್ ಉಳಿಕೆ ಇದೆ. ಕೋವಾಕ್ಸಿನ್ 20,460 ಡೋಸ್ ನೀಡಲಾಗಿದ್ದು, ಉಳಿಕೆ ಇರುವುದಿಲ್ಲ. 2,41,578 ಮಂದಿಗೆ ಮೊದಲ ಡೋಸ್ ನೀಡಲಾಗಿದ್ದು, 54,358 ಮಂದಿಗೆ ಎರಡನೇ ಡೋಸ್ ಪೂರ್ಣಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 552 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 383 ರೆಮಿಡಿಸಿವರ್ ಇಂಜೆಕ್ಷನ್ ಲಭ್ಯವಿದೆ. 88 ಸಕ್ರಿಯ ಕಂಟೈನ್ಮೆಂಟ್ ಜೋನ್ ಗಳಿವೆ. ಮಾಸ್ಕ್ ಧರಿಸದ 9207 ಪ್ರಕರಣಗಳಲ್ಲಿ 12,76,850 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.
https://www.suddikanaja.com/2021/04/28/tight-lockdown-in-shivamogga/