ಸುದ್ದಿ ಕಣಜ.ಕಾಂ
ಭದ್ರಾವತಿ: ವಿ.ಐ.ಎಸ್.ಎಲ್ ಆವರಣದಲ್ಲಿರುವ ಎಂ.ಎಸ್.ಪಿ.ಎಲ್ ಆಕ್ಸಿಜನ್ ಘಟಕದಲ್ಲಿ ಆಮ್ಲಜನಕ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
VIDEO REPORT
ಆಕ್ಸಿಜನ್ ಪ್ಲಾಂಟ್ ಗೆ ಭೇಟಿ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪ್ರತಿದಿನ 150 ಸಿಲಿಂಡರ್ ಆಕ್ಸಿಜನ್ ಉತ್ಪಾದನೆ ಆರಂಭಿಸಲಾಗಿದೆ. ಹೊಸ ಕಂಪ್ರೆಸ್ಸರ್ ಅಳವಡಿಸಿದರೆ ಉತ್ಪಾದನೆಯನ್ನು 400ರಿಂದ 500 ಸಿಲಿಂಡರ್ ಗಳಿಗೆ ಹೆಚ್ಚಿಸಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಯಂತ್ರೋಪಕರಣ ಖರೀದಿ ಸೇರಿದಂತೆ ಸರ್ಕಾರದಿಂದ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
https://www.suddikanaja.com/2021/05/05/shortly-visl-oxygen-plant-starts-working/
ರಾಜ್ಯದ ಆಕ್ಸಿಜನ್ ಬೇಡಿಕೆಯನ್ನು ಈಡೇರಿಸಲು ಸರಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಬಳ್ಳಾರಿಯ ಜಿಂದಾಲ್ ಕಂಪೆನಿ ಪ್ರಸ್ತುತ 500 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ಸರ್ಕಾರದ ಮನವಿಯಂತೆ 1 ಸಾವಿರ ಮೆ.ಟನ್ ಗೆ ಹೆಚ್ಚಿಸಲು ಒಪ್ಪಿಕೊಂಡಿದೆ ಎಂದು ಹೇಳಿದರು.
ಕೋವಿಡ್ ತಡೆಗೆ ಎಲ್ಲ ಪ್ರಯತ್ನ | ಸದ್ಯ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡಲಾಗುತ್ತಿದೆ. ವಿ.ಐ.ಎಸ್.ಎಲ್.ನಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಅಗತ್ಯವಿರುವ ಎಲ್ಲ ತಾಂತ್ರಿಕ ನೆರವು ಒದಗಿಸಲು ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಾಸಕರಾದ ಬಿ.ಕೆ.ಸಂಗಮೇಶ್ವರ್, ಎಸ್.ರುದ್ರೇಗೌಡ, ಜಿಪಂ ಸಿಇಒ ಎಂ.ಎಲ್.ವೈಶಾಲಿ, ವಿ.ಐ.ಎಸ್.ಎಲ್ ಸಂಸ್ಥೆಯ ಸುರ್ಜೀತ್ ಮಿಶ್ರಾ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/03/14/action-to-revive-visl-factory-mp-by-raghavendra-said/