ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹಿರಿಯ ಅಭಿಲೇಖಾಲಯ ಕಚೇರಿ, ಅಸ್ಸಾಂ ರೆಜಿಮೆಂಟ್ ಇವರು ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿ ಆಯೋಜಿಸಿದ್ದು, ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 6ರಿಂದ ಜುಲೈ 20 ರೊಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.joinindianarmy.nic.in ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.