ಬೆಳೆ ವಿಮಾ ನೋಂದಣಿಗೆ ಅಧಿಸೂಚನೆ ಜಾರಿ, ಮುಂಗಾರು ಹಂಗಾಮಿಗೆ ಆಯ್ಕೆಯಾದ ಬೆಳೆಗಳಾವವು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರಸ್ತುತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ, ಜೋಳ ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ.

https://www.suddikanaja.com/2020/12/16/crop-survey-application-for-farmers/

ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಸಂಸ್ಥೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಡಾ. ಕಿರಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತಿಮ‌ ದಿನಾಂಕ | ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಮುಸುಕಿನ ಜೋಳ (ನೀರಾವರಿ,  ಮಳೆ ಆಶ್ರಿತ) ಬೆಳೆಗೆ ಜುಲೈ 31 ಹಾಗೂ ಭತ್ತ (ನೀರಾವರಿ, ಮಳೆ ಆಶ್ರಿತ), ಜೋಳ (ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಬೆಳೆಗಳಿಗೆ ಆಗಸ್ಟ್ 16 ಅಂತಿಮ ದಿನಾಂಕಗಳಾಗಿರುತ್ತವೆ.
ನೋಂದಣಿಯ ಏಳು ದಿನ ಮುಂಚೆ ಲಿಖಿತವಾಗಿ ನೀಡಿದರೆ ಬೆಳೆ ವಿಮಾದಿಂದ ಕೈಬಿಡಲಾಗುವುದು |ಬಿತ್ತನೆ, ನಾಟಿ ಮಾಡುವುದಕ್ಕಿಂತ ಮುಂಚೆಯೇ ನೋಂದಾಯಿಸಲು ಸಹ ಅವಕಾಶ ಇರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮಾ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು, ತದ ನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದರೆ ಅಂತಹ ರೈತರನ್ನು ಬೆಳೆ ವಿಮಾ ಯೋಜನೆಯಿಂದ ಕೈಬಿಡಲಾಗುವುದು.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್, ಆರ್ಥಿಕ ಸಂಸ್ಥೆಗಳು, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ವೆಬ್ ಸೈಟ್‍  http://samrkshane.karnataka.gov.in ಸಹ ಮಾಹಿತಿ ಪಡೆಯಬಹುದು  ಎಂದು ಹೇಳಿದ್ದಾರೆ.

https://www.suddikanaja.com/2021/02/02/preparation-to-catch-wild-tusker-in-umblebailu-forest/

error: Content is protected !!