ಸುದ್ದಿ ಕಣಜ.ಕಾಂ | DISTRICT | HEALTH
ಶಿವಮೊಗ್ಗ: ಕೋವಿಡ್ ಮೂರನೇ ಸಂಭಾವ್ಯ ಅಲೆಯನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
https://www.suddikanaja.com/2021/08/07/covid-cases-in-shivamogga-6/
ಜಿಲ್ಲಾಡಳಿತ ಸಭಾಂಗಣದಲ್ಲಿ ಸೋಮವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಮಲೆನಾಡು ತಾಲೂಕುಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಅದಕ್ಕಾಗಿಯೇ ಇಲ್ಲಿಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಆರ್.ಟಿ. ಪಿ.ಸಿ.ಆರ್. ನೆಗೆಟಿವ್ ವರದಿ ತರುವಂತೆ ಸೂಚಿಸಲಾಗಿದೆ. ಪ್ರವಾಸೋದ್ಯಮ ತಾಣಗಳಲ್ಲೂ ಇದೇ ನಿರ್ಬಂಧ ವಿಧಿಸಲಾಗಿದೆ ಎಂದರು.
ಲಸಿಕೆ ಕುರಿತು ಒಂದು ದಿನ ಪೂರ್ವವೇ ಮಾಹಿತಿ ನೀಡಿ
ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆ ಇಲ್ಲ. ಆದರೂ ಕೆಲವು ಆರೋಗ್ಯ ಕೇಂದ್ರಗಳಲ್ಲಿ ಬೆಳಗಿನಿಂದಲೇ ಜನರ ಸರದಿ ಇರುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಲಸಿಕೆ ಲಭ್ಯತೆಯ ಬಗ್ಗೆ ಸಾರ್ವಜನಿಕರಿಗೆ ಒಂದು ದಿನ ಮೊದಲೇ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ಶಾಸಕರಾದ ಹರತಾಳು ಹಾಲಪ್ಪ, ಅಶೋಕ ನಾಯ್ಕ್, ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ರುದ್ರೇಗೌಡ, ಮಹಾನಗರ ಪಾಲಿಕೆ ಅಧ್ಯಕ್ಷೆ ಸುನಿತಾ ಅಣ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಡಿ.ಎಸ್.ಅರುಣ್, ದತ್ತಾತ್ರೇಯ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/05/17/covid-3rd-wave/