ಸುದ್ದಿ ಕಣಜ.ಕಾಂ | CITY | PROTEST
ಶಿವಮೊಗ್ಗ: ಮಹಾನಗರ ಪಾಲಿಕೆಯ ಕಚೇರಿಗೆ ಆಗಸ್ಟ್ 25ರಂದು ಬೆಳಗ್ಗೆ 11 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ್ ಕುಮಾರ್ ತಿಳಿಸಿದರು.
https://www.suddikanaja.com/2020/12/20/shivamogga-city-corporation-tax-increase/
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪಾಲಿಕೆಯಿಂದ ವಿಧಿಸಿರುವ ಅವೈಜ್ಞಾನಿಕ ತೆರಿಗೆಯನ್ನು ವಿರೋಧಿಸಿ ಮುತ್ತಿಗೆ ಹಾಕಲಾಗುತ್ತಿದೆ ಎಂದು ಹೇಳಿದರು.
ತೆರಿಗೆಯಲ್ಲಿನ ಲೋಪಗಳ ಬಗ್ಗೆ ಸರ್ಕಾರ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಮುತ್ತಿಗೆಯ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಜನ ಕೋವಿಡ್ ನಿಂದಾಗಿ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ತೆರಿಗೆ ಏರಿಕೆ ಮಾಡಿರುವುದು ಸರಿಯಾದ ಕ್ರಮವಲ್ಲ. ಅವೈಜ್ಞಾನಿಕವಾಗಿ ಎಸ್.ಆರ್. ದರ ಆಧರಿಸಿ ತೆರಿಗೆಯನ್ನು ವಿಧಿಸಲಾಗುತ್ತಿದೆ. ಈ ಪದ್ದತಿಯನ್ನು ಯಾವ ಬುದ್ಧಿವಂತರು ಹೇಳಿಕೊಟ್ಟರೋ ಗೊತ್ತಿಲ್ಲ. ಜತೆಗೆ,
ಖಾಲಿ ನಿವೇಶನಗಳಿಗೂ ತೆರಿಗೆ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು.
ಒಕ್ಕೂಟದ ಅಧ್ಯಕ್ಷ ಬಿ.ವಿ.ಗೋಪಾಲಕೃಷ್ಣ, ಪದಾಧಿಕಾರಿಗಳಾದ ಡಾ. ಸತೀಶ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯ, ಸೀತಾರಾಮ್, ಅಶೋಕ್ಕುಮಾರ್ ಉಪಸ್ಥಿತರಿದ್ದರು.
https://www.suddikanaja.com/2021/08/19/special-offer-on-nandini-sweets/