ಸುದ್ದಿ ಕಣಜ.ಕಾಂ | DISTRICT |
ಶಿವಮೊಗ್ಗ: ರಾಜ್ಯದಲ್ಲಿಯೇ ಮೈಸೂರು ನಂತರದ ಸ್ಥಾನ ತುಂಬುವ ಶಿವಮೊಗ್ಗ ದಸರಾ ಆಚರಣೆ ಕೆಲವು ರೂಲ್ಸ್ಗಳನ್ನು ವಿಧಿಸಲಾಗಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
‘ಸರಳ’, `ಭಕ್ತಿಪೂರ್ವಕ’ ಹಾಗೂ ವಿಜೃಂಭಣೆಯೊಂದಿಗೆ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಆಚರಿಸಬೇಕು ಎಂದು ಸೂಚನೆ ನೀಡಿದರು.
ಶಿವಮೊಗ್ಗ ದಸರಾ ಆಚರಣೆಯ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ವಿಡಿಯೋ ರಿಪೋರ್ಟ್
ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲ ಮುಂಜಾಗರೂಕತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ.
ಫ್ರೀಡಂ ಪಾರ್ಕ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
9 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ವಿಜಯ ದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಸ್ಥಾನಗಳಿಗೆ ಪೂಜೆ ಆಲಂಕಾರಕ್ಕಾಗಿ ?4 ಸಾವಿರ ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲ ದೇವಸ್ಥಾನಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಸ್ಥಾನಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.
ವಿವಿಧೆಡೆ ಎಲ್.ಇ.ಡಿ ಪರದೆ ವ್ಯವಸ್ಥೆ
ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ್ ವಟಾರೆ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
https://www.suddikanaja.com/2021/09/22/shivamogga-dasara-celebration/