ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಮಾಚೇನಹಳ್ಳಿ ಸಮೀಪ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭದ್ರಾವತಿ ತಾಲೂಕಿನ ಜಯಂತಿ ಗ್ರಾಮದ ನಿವಾಸಿ ಅಂಥೋನಿ(34), ಮಂಜುನಾಥ್(28) ಎಂಬುವವರು ಮೃತಪಟ್ಟಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಯುವಕರು ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತಿದ್ದ ಬಸ್, ಬೈಕ್ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಬೈಕ್ ಸವಾರರ ಶವಗಳು ದೂರ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.
ಸಾರ್ವಜನಿಕರಿಂದ ತರಾಟೆ
ರಸ್ತೆ ಉಬ್ಬಿನಲ್ಲಿ (ಹಂಪ್ಸ್) ಬೈಕ್ ನಿಧಾನಗೊಳಿಸಿದ್ದು, ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ್ದೇ ಸ್ಥಳದಲ್ಲಿದ್ದ ಸಾರ್ವಜನಿಕರು ಬಸ್ ಚಾಲಕನಿಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/10/01/serial-accident-in-shikaripura-road/