ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಶುಕ್ರವಾರ ಮತ ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಘೋಷಣೆಯಾದಾಗಿಂದ ನಿರಂತರ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ಅಭ್ಯರ್ಥಿಯ ಪರ ಮತಯಾಚನೆ ಮಾಡಿದ್ದರು.
ಮತದಾನದ ದಿನವಾದ ಶುಕ್ರವಾರದಂದು ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಅಭ್ಯರ್ಥಿಯೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷದವರಿಗೆ ಚುನಾವಣೆ ಫಲಿತಾಂಶವೇ ಉತ್ತರವಾಗಲಿದೆ. ಕರ್ನಾಟಕದಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಅವರು 500 ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಯ 10 ಶಾಸಕರುಗಳಲ್ಲಿ 9 ಜನ ಹಾಗೂ ಮೂವರು ಎಂಪಿಗಳು ಬಿಜೆಪಿಯವರೇ ಆಗಿದ್ದಾರೆ. ಅವರು ಉತ್ಸಾಹದಿಂದ ಅಭ್ಯರ್ಥಿಯ ಪರ ಪ್ರಚಾರ ಕಾರ್ಯವನ್ನು ಮಾಡಿದ್ದಾರೆ. ಅರುಣ್ ಅವರು ಮೊದಲನೇ ಸುತ್ತಿನಲ್ಲೇ ಗೆಲ್ಲಲಿ ಎಂಬುವುದು ನನ್ನ ಅಪೇಕ್ಷೆಯಾಗಿದೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದರೆ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದ್ದು, ಬಿಜೆಪಿ ಪರ ಅಲೆ ಇದೆ ಎಂದರ್ಥ ಎಂದು ತಿಳಿಸಿದರು.
https://www.suddikanaja.com/2021/11/08/movie-shooting-in-shivamogga/