ಸುದ್ದಿ ಕಣಜ.ಕಾಂ | CITY | ELECTION NEWS
ಶಿವಮೊಗ್ಗ: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಮತ ಎಣಿಕೆಯು ಡಿಸೆಂಬರ್ 14ರಂದು ನಡೆಯಲಿದೆ.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ. ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜಿನ ವ್ಯಾಪ್ತಿಯಲ್ಲಿ ಡಿಸೆಂಬರ್ 14 ರಂದು ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 15 ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಳಾದ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ನಿಷೇಧಾಜ್ಞೆ ವೇಳೆ ಮತ ಎಣಿಕೆ ಕೇಂದ್ರದ ಆವರಣದ ಹೊರಗೆ 100 ಮೀಟರ್ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದು, ಪಟಾಕಿ ಹೊಡೆಯುವುದು, ಆಯುಧಗಳು, ಸ್ಫೋಟಕ ವಸ್ತುಗಳನ್ನು ಹೊಂದುವುದು, ಸಾಗಿಸುವುದನ್ನು ನಿಷೇಧಿಸಲಾಗಿದೆ.
ಮತ ಎಣಿಕೆ ಕೇಂದ್ರದ ಪರಿಮಿತಿ 1 ಕಿ.ಮೀ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲ ತರಹದ ಜಾತ್ರೆಗಳನ್ನು ಹಾಗೂ ಭಾರಿ ಪ್ರಮಾಣದಲ್ಲಿ ಜನ ಗುಂಪುಗಾರಿಕೆ, ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
https://www.suddikanaja.com/2020/12/08/peace-meeting-in-shivamogga/