ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ ಮಾಡಲಾಗಿದ್ದು, ಅಕ್ರಮವಾಗಿ ದಾಸ್ತಾನು ಮಾಡಿದ್ದ ಶ್ರೀಗಂಧ, ಬೀಟೆ ಹಾಗೂ ಪರವಾನಗಿರಹಿತ ಬಂದೂಕನ್ನು ವಶಕ್ಕೆ ಪಡೆಯಲಾಗಿದೆ.
ತಾಲೂಕಿನ ಚಿಪ್ಳಿ-ಲಿಂಗದಳ್ಳಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಸೋಮವಾರ ರಾತ್ರಿ ಕಾರ್ಯಾಚರಣೆ ಮಾಡಲಾಗಿದ್ದು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.