ಸುದ್ದಿ ಕಣಜ.ಕಾಂ | CITY | MEAT SHOP CLOSE
ಶಿವಮೊಗ್ಗ: ಜನವರಿ 15ರಂದು ಮಕರ ಸಂಕ್ರಮಣ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.