ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಕೋವಿಡ್ ಪಾಸಿಟಿವ್ (covid positive) ಬಂದಾಕ್ಷಣ ಏನು ಮಾಡಬೇಕು ಎಂಬುವುದೇ ದೊಡ್ಡ ಪ್ರಶ್ನೆ. ಎಲ್ಲಿ ಪರೀಕ್ಷೆಗೆ ಒಳಪಡಬೇಕು, ಟ್ರಯಾಜ್ (triage) ಸೌಲಭ್ಯ ಪಡೆಯುವುದು ಹೇಗೆ ಇದೆಲ್ಲದಕ್ಕೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸ್ಮಾರ್ಟ್ ಹೆಜ್ಜೆ ಇಡಲಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr R Selvamani) ಅವರು ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆ(District Level Covid Experts Meeting)ಯಲ್ಲಿ ಗುರುವಾರ ಮಾಹಿತಿ ನೀಡಿದ್ದಾರೆ.
READ | ಶಿವಮೊಗ್ಗದಲ್ಲಿ ಇಂದು ದಾಖಲೆಯ ಕೊರೊನಾ ಸೋಂಕು, ಮೂರನೇ ಬಲಿ
ಜಿಲ್ಲಾಡಳಿತ ಕೈಗೊಳ್ಳಲಿರುವ ಕ್ರಮಗಳೇನು?
- ಒಂದೆರಡು ದಿನಗಳಲ್ಲಿ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್ಗಳನ್ನು ಪ್ರಾರಂಭಿಸಲಾಗುತ್ತಿದೆ. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಟೆಲಿಫೋನ್ ಮೂಲಕ ಟ್ರಯಾಜ್ (decide the order of treatment of patients or casualties) ಮಾಡಲು ವ್ಯವಸ್ಥೆ ಕೂಡ ಶೀಘ್ರವೇ ಜಾರಿಗೆ ತರಲಾಗುತ್ತಿದೆ. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ (kit) ನೀಡಲಾಗುತ್ತಿದೆ.
- ಶಾಲಾ ಕಾಲೇಜುಗಳಲ್ಲಿ ಸಹ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ (booster) ಡೋಸ್ (dose) ನೀಡಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ, ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.
ಲಸಿಕೆ ಪಡೆದವರ ಮೇಲೆ ವೈರಸ್ ಪರಿಣಾಮ ಕಡಿಮೆ
ಮೂರನೇ ಅಲೆ (covid third wave) ಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿ ಅಂಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಎರಡು ಲಸಿಕೆ ಹಾಕದ 17 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೋವಿಡ್ ರೋಗ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ.99 ಮಂದಿ ಪ್ರಥಮ ಡೋಸ್ ಹಾಗೂ ಶೇ.84ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿದೆ ಎಂಬುವುದು ಇದರಿಂದ ಸ್ಪಷ್ಟ ಎಂದು ಡಾ.ಸೆಲ್ವಮಣಿ ಹೇಳಿದರು.
https://www.suddikanaja.com/2022/01/19/corona-positive-cases-in-increasing-at-shivamogga-school-and-colleges/