ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (District Employment Exchange Office) ವತಿಯಿಂದ ಮಾರ್ಚ್ 22ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ವೃತ್ತಿ ಸೇವೆ(ಎನ್.ಸಿ.ಎಸ್) ಯೋಜನೆಯಡಿ ಉದ್ಯೋಗ ಮೇಳ(Job Fair)ವನ್ನು ಆಯೋಜಿಸಲಾಗಿದೆ.
READ | ಯಾವುದೇ ಪದವಿ ಪಾಸ್ ಆಗಿದ್ದರೂ ಮಂಗಳೂರಿನಲ್ಲಿ ಉದ್ಯೋಗ, ಮಾಸಿಕ 25 ಸಾವಿರ ಸಂಬಳ
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪೆನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಯಾರ್ಯಾರು ಭಾಗವಹಿಸಲು ಅವಕಾಶ
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ
ಉದ್ಯೋಗ ಮೇಳವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದ್ದು ಪ್ರವೇಶ ಉಚಿತವಾಗಿರುತ್ತದೆ.
READ | KPSC Recruitment ಪೊಲೀಸ್ ಇಲಾಖೆಯಲ್ಲಿ ‘ಎ’ ವೃಂದದ ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂರವಾಣಿ ಸಂಖ್ಯೆ 08182-255293, 9535312531, 9482023412 ಅನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.