ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಆಲ್ಕೋಳದಲ್ಲಿರುವ ಶಾಲೆಯೊಂದರಲ್ಲಿ ನಿಲ್ಲಿಸಿದ್ದ ಬಸ್ ಗಳ ಐದು ಬ್ಯಾಟರಿಗಳನ್ನು ಕಳ್ಳತನ ಮಾಡಿರುವ ಘಟನೆ ಇತ್ತೀಚೆಗೆ ನಡೆದಿದ್ದು, ಗುರುವಾರ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಲ್ಕೋಳ ವಿಕಾಸ ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಮೂರು ಬಸ್ ಗಳ ಅಂದಾಜು 70,000 ರೂಪಾಯಿ ಮೌಲ್ಯದ ಐದು ಬ್ಯಾಟರಿಗಳನ್ನು ಕಳ್ಳತನ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.