ಶಿವಮೊಗ್ಗದ ಜ್ಯೋತಿನಗರದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಐದೇ ದಿನಗಳಲ್ಲಿ‌ ಅರೆಸ್ಟ್

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಜ್ಯೋತಿನಗರದ ಮನೆಯೊಂದರ‌ ಬೀಗ ಮುರಿದು ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ವಿನೋಬನಗರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬೊಮ್ಮನಕಟ್ಟೆ ನಿವಾಸಿ ಪರಮೇಶ್ ಅಲಿಯಾಸ್ ಪಾಪ(40) ಬಂಧಿತ. ಏಪ್ರಿಲ್ 9ರಂದು‌ ಜ್ಯೋತಿನಗರದಲ್ಲಿ ಯಾರೋ ಕಳ್ಳರು ಮನೆಯ ಬೀಗ ಮುರಿದು ಒಳಗಡೆ ಬೀರುವಿನಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಐಪಿಸಿ ಕಲಂ 454, 457, 380 ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ವಿನೋಬನಗರ ಪೊಲೀಸ್ ಠಾಣೆ ಪಿಐ ಹಾಗೂ ಸಿಬ್ಬಂದಿ ತಂಡವು ತನಿಖೆಯನ್ನು ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ 42 ಗ್ರಾಂ ಬಂಗಾರದ ಆಭರಣಗಳು ಹಾಗೂ 60 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!