ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ (BY Raghavendra) ತಿಳಿಸಿದರು.
VIDEO REPORT
READ | ಶಿವಮೊಗ್ಗಕ್ಕೆ ಬಂದ ಮೊದಲ ವಿಮಾನ, ಏನೇನಾಯ್ತು, ಏನಿದರ ವಿಶೇಷ?
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.27ರ ಬೆಳಗ್ಗೆ 11.15 ಕ್ಕೆ ಪ್ರಧಾನಿ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ ವೇಗೆ ವಿಮಾನದಲ್ಲಿ ಆಗಮಿಸಲಿದ್ದಾರೆ. ಎರಡು ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಧ್ಯಾಹ್ನ 1 ಗಂಟೆಗೆ ಬೆಳಗಾವಿಗೆ ತೆರಳಲಿದ್ದಾರೆ. ಈಗಾಗಲೇ ಡಿಜಿಸಿಎಯಿಂದ ಏರ್ ಪೋರ್ಟ್ ಲೈಸೆನ್ಸ್ ಸಿಕ್ಕಿದೆ. ರಾಜ್ಯದಲ್ಲಿಯೇ ಮೊದಲ ಹಂತದಲ್ಲಿಯೇ ಲೈಸೆನ್ಸ್ ಸಿಕ್ಕ ಮೊದಲ ಏರ್ ಪೋರ್ಟ್ ಇದಾಗಿದೆ ಎಂದರು.
ಜನ 10 ಗಂಟೆಯೊಳಗೆ ಆಗಮಿಸಬೇಕು
ವಿಮಾನ ನಿಲ್ದಾಣ ಉದ್ಘಾಟನೆಗೆ ಸುಮಾರು 3 ಲಕ್ಷಕ್ಕಿಂತ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 10 ಗಂಟೆಯೊಳಗೆ ವಿಮಾನ ನಿಲ್ದಾಣದೊಳಗೆ ಸಾರ್ವಜನಿಕರು ಆಗಮಿಸಬೇಕು. ಬಳಿಕ ಗೇಟ್ ಮುಚ್ಚಲಾಗುತ್ತದೆ. ಹೀಗಾಗಿ ಮೊದಲೇ ಸಾರ್ವಜನಿಕರು ಒಳಗೆ ಆಗಮಿಸಬೇಕಾಗಿದೆ ಎಂದು ಮನವಿ ಮಾಡಿದರು.
ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಧಾನಿ ಮೋದಿ ಅವರು ಹೈವೇ, ಸ್ಮಾರ್ಟ್ ಸಿಟಿ, ರೈಲ್ವೆ ಕಾಮಗಾರಿಗಳನ್ನು ಮತ್ತು ಹಲವು ಗ್ರಾಮಗಳಿಗೆ ನೀರಿನ ಸೌಲಭ್ಯ, ಜನ್ ಜೀವನ್ ಮಿಷನ್ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಶಿವರಾಜ್, ಬಿ.ಕೆ. ಶ್ರೀನಾಥ್, ಜಗದೀಶ್, ಪುರುಷೋತ್ತಮ್ ಹೃಷಿಕೇಶ್ ಪೈ ಉಪಸ್ಥಿತರಿದ್ದರು.
Dog Show | ಶ್ವಾನಗಳ ತುಂಟಾಟಕ್ಕೆ ಮಕ್ಕಳು ಫಿದಾ, ಒಂದೇ ಕಡೆ 30ಕ್ಕೂ ಹೆಚ್ಚು ಶ್ವಾನ ತಳಿಗಳ ದರ್ಶನ