One click many news | ಶಿವಮೊಗ್ಗ, ದಾವಣಗೆರೆಯಲ್ಲಿ ನಿಧಿ ಆಪ್ಕೆ ನಿಕಟ್, ಎಲ್ಲೆಲ್ಲಿ ಕಾರ್ಯಕ್ರಮ?, ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ, ಸ್ವಯಂ ಉದ್ಯೋಗ ಅವಕಾಶ

one click many news 1

 

 

ಸುದ್ದಿ‌ ಕಣಜ.ಕಾ‌ಂ ಶಿವಮೊಗ್ಗ
SHIVAMOGGA: ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.27 ರಂದು ಆಯೋಜಿಸಲಾಗಿದೆ.
ಎಲ್ಲೆಲ್ಲಿ ಕಾರ್ಯಕ್ರಮ?
ಸೆ.27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸೇಂಟ್ ಜೋಸೆಫ್ ಶಾಲೆ, ಮಂಕಾಳಲೆ, ಸಾಗರ,  ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹೋಟೆಲ್ ಪೂಜಾ ಇಂಟರ್‍ನ್ಯಾಷನಲ್, 1ನೇ ಮಹಡಿ, ದೇವರಾಜ ಅರಸ್ ಬಡಾವಣೆ, ಹಳೆ ಪಿಬಿ ರಸ್ತೆ ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ II ತಿಳಿಸಿದ್ದಾರೆ.

READ | ಶಿವಮೊಗ್ಗ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್, ತೀರ್ಥಹಳ್ಳಿ ಯುವಕ ಅರೆಸ್ಟ್, ಆತನ ವಿರುದ್ಧದ ಆರೋಪಗಳೇನು?

ಪರೀಕ್ಷೆಗೆ ಅರ್ಜಿ ಆಹ್ವಾನ

SHIMOGA: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ(ಎನ್.ಎಂ.ಎಂ.ಎಸ್) ಪರೀಕ್ಷೆಯು ಡಿ.17ರಂದು ನಡೆಸಲಾಗುತ್ತಿದ್ದು, ಸರ್ಕಾರಿ ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಪ್ರಸಕ್ತ ಸಾಲಿನ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ಅ.4ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲ ಬಿ.ಆರ್.ಬಸವರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ,: 08182-270597/228127ಗಳನ್ನು ಅಥವಾ ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವುದು.

ರೈತ/ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Agriculrue university
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ನವಿಲೆ

SHIMOGA: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ.
ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು  ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಿದ ರೈತ/ ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು. ಈ ಪ್ರಶಸ್ತಿಯನ್ನು ಅಕ್ಟೋಬರ್ 2023 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರದಾನ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ  ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ https://www.uahs.edu.in/ ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ  30ನೇ ಸೆಪ್ಟೆಂಬರ್ 2023 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890,
ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣ ಕನ್ನಡ- 8794706468, 8277931060,  ಮಡಿಕೇರಿ- 9480838210, 7259005540 ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ.  ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು  ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2023 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು.

ಉದ್ಯಮಶೀಲತಾ ತಿಳಿವಳಿಕೆ ತರಬೇತಿ

Job Training

SHIMOGA: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಬಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಒಂದು ದಿನದ ‘ಉದ್ಯಮಶೀಲತಾ ತಿಳಿವಳಿಕೆ ತರಬೇತಿ ಶಿಬಿರ’ ವನ್ನು ಸೆ.21-09-2023 ರಂದು ಜನಶಿಕ್ಷಣ ಸಂಸ್ಥಾನ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.
ಶಿಬಿರದಲ್ಲಿ ಸ್ವಂತ ಉದ್ಯಮ ಸ್ಥಾಪನೆಗೆ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಇತ್ಯಾದಿ ವಿಷಯ ಕುರಿತು ಮಾಹಿತಿ ನಿಡಲಾಗುವುದು. ಕನಿಷ್ಠ 18 ವರ್ಷ ವಯಸ್ಸಿನ, ಓದಲು. ಬರೆಯಲು ಬರುವ ಅಭ್ಯರ್ಥಿಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಬಹುದು. ಪ.ಜಾತಿ, ಪ.ಪಂ ಮತ್ತು ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಶಿಬಿರದಲ್ಲಿ ಭಾವಹಿಸುವವರು 2 ಪಾಸ್‍ಪೋರ್ಟ್ ಅಳತೆ ಫೋಟೊ ಮತ್ತು ಆಧಾರ್ ಕಾರ್ಡ್ ಪ್ರತಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್, ನೆಹರು ರಸ್ತೆ, ಶಿವಮೊಗ್ಗ ಹಾಗೂ ಸಿಡಾಕ್ ತರಬೇತುದಾರ ಅವಿನಾಶ್ ದೂ.ಸಂ: 9164811887 ಇವರನ್ನು ಸಂಪರ್ಕಿಸಬಹುದು.

error: Content is protected !!