Hindu mahasabha Ganesh procession | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ಸ್ಥಿತಿ? ಎಷ್ಟು ಜನ ಸೇರಿದ್ದಾರೆ? ಇಲ್ಲಿದೆ ಮಾಹಿತಿ

hindu mahasabha procession

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಗುರುವಾರ ಬೆಳಗ್ಗೆ ಆರಂಭಗೊಂಡಿದೆ.
ನಗರ ಸೇರಿದಂತೆ ವಿವಿಧೆಡೆಯಿಂದ ಸಾರ್ವಜನಿಕರು, ಯುವಕ ಯುವತಿಯರು ಮೆರವಣಿಗೆಯಲ್ಲಿ ಪಾಲೊಂಡಿದ್ದಾರೆ. ವಿಶೇಷ ಹಾರಗಳನ್ನು ತಯಾರಿಸಿ ಗಣೇಶನಿಗೆ ಅರ್ಪಿಸಲಾಗುತ್ತಿದೆ.

READ | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, 3 ವಿಶೇಷ ಅಧಿಕಾರಗಳನ್ನು ನೇಮಿಸಿ ಸರ್ಕಾರ ಆದೇಶ, ಕಾರಣವೇನು?

ರಾಜಬೀದಿ ಉತ್ಸವ ಸಾಗುವ ಮಾರ್ಗದಲ್ಲಿ ವಿಶೇಷ ಅಲಂಕಾರ, ರಂಗೋಲಿ ಸೇರಿದಂತೆ ಅಲಂಕಾರ ಮಾಡಲಾಗಿದೆ. ಎಲ್ಲ ವಯೋಮಾನದವರು ಗಣೇಶನ ಮೆರವಣಿಗೆಯ ಮುಂದೆ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ.
ಮೆರವಣಿಗೆಯು ಬೆಳಗ್ಗೆ 10.30 ಗಂಟೆಗೆ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಹೊರಟಿದೆ. ಮೆರವಣಿಗೆಗೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಡಾ.ಎಸ್.ಪಿ.ಎಂ.ರಸ್ತೆ, ಗಾಂಧಿ ಬಜಾರ್, ಬಿ.ಎಚ್.ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ, ಕುವೆಂಪು ರಸ್ತೆ, ಕೋಟೆ ಅಂಚೆ ಕಚೇರಿ ರಸ್ತೆ ಮೂಲಕ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಮೆರವಣಿಗೆ ತಲುಪಲಿದೆ. ದೇಗುಲದ ಹಿಂಬದಿ ಭೀಮನ ಮಡುವಿನಲ್ಲಿ ಗಣಪತಿಯ ವಿಸರ್ಜನೆ ನಡೆಯಲಿದೆ.
ಮೆರವಣಿಗೆ ಸಾಗುವ ಮಾರ್ಗದ ವಿವರ
ಸೆ.28ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧೀ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಎಚ್ ರಸ್ತೆ ಮುಖಾಂತರ ಎ.ಎ ಸರ್ಕಲ್, ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್ ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಠಾಣೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ಸಾಗಿ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

ಮೆರವಣಿಗೆ ಹಿನ್ನೆಲೆ ಬದಲಾದ ಮಾರ್ಗ

SHIMOGA: ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.

  1. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ.
  2. ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  3. ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  4. ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋದುವ ಎಲ್ಲಾ ಭಾರೀ ವಾಹನಗಳು ಮತ್ತು ಬ???ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  5. ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
  6. ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.
  7. ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Hindu Mahasabha Ganesh | 30 ಅಡಿ ಎತ್ತರದ ‘ಉಗ್ರ ನರಸಿಂಹ’ ವೀಕ್ಷಿಸಲು‌ ಜನವೋ ಜನ, ಶಿವಮೊಗ್ಗ ನಗರ ಕೇಸರಿಮಯ, ಈ‌‌ ಸಲದ‌ ಘೋಷಣೆ ಏನು?

error: Content is protected !!