ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹2 ಲಕ್ಷ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ಹಾಗೂ ನೊಂದ ಬಾಲಕಿಗೆ ಪರಿಹಾರವಾಗಿ ₹3 ಲಕ್ಷ ನೀಡಲು ಆದೇಶಿಸಲಾಗಿದೆ.
READ | ಮನೆ ಪಕ್ಕಒಣಗಲು ಹಾಕಿದ್ದ ಅಡಿಕೆ ಕಳವು, ಆರೋಪಿಗಳು ಅರೆಸ್ಟ್
2021ನೇ ಸಾಲಿನಲ್ಲಿ ದಾವಣಗೆರೆ ನ್ಯಾಮತಿಯ ವಾಸಿ 34 ವರ್ಷದ ವ್ಯಕ್ತಿಯೊಬ್ಬನು, 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಆಗಿನ ತನಿಖಾಧಿಕಾರಿ ಎನ್.ಎಸ್.ರವಿ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. The Addl District and Sessions Court, FTSC–II (POCSO) ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ದೃಢಪಟ್ಟಿದ್ದರಿಂದ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.