ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಪಟ್ಟಣದ ಕಡದಕಟ್ಟೆ(Kadadakatte)ಯಲ್ಲಿ ಚಿಕ್ಕಮ್ಮನ ಬಂಗಾರದ ತಾಳಿ ದೋಚಿದ್ದ ಆರೋಪಿಯನ್ನು 24 ಗಂಟೆಯೊಳಗೆ ಪೊಲೀಸ್ ಬಂಧಿಸಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲ್ಲೂಕು ಕುರುಬನಪುರ ಗ್ರಾಮದ ಕೆ.ಎನ್.ನಾಗರಾಜ (32) ಎಂಬುವವನನ್ನು ಬಂಧಿಸಲಾಗಿದೆ. ಅವನ ಬಳಿಯಿಂದ ಅಂದಾಜು ₹4.50 ಮೌಲ್ಯದ 88 ಗ್ರಾಂ. ತೂಕದ ಬಂಗಾರದ ತಾಳಿ ಸರವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕತ್ತಿಗೆ ಟವಲ್ ಬಿಗಿದು ತಾಳಿ ದೋಚಿ ಪರಾರಿ
ಸೋಮವಾರ ಬೆಳಗ್ಗೆ ಕಡದಕಟ್ಟೆಯ ಮಹಿಳೆಯೊಬ್ಬರ ಮನೆಗೆ ಆಕೆಯ ಗಂಡನ ಅಣ್ಣನ ಮಗ ನಾಗರಾಜನು ಬಂದಿದ್ದು, ಆತನು ತನ್ನ ಹತ್ತಿರ ಇದ್ದ ಟವಲ್ ಅನ್ನು ತೆಗೆದುಕೊಂಡು ಮಹಿಳೆಯ ಕುತ್ತಿಗೆಗೆ ಬಿಗಿದಿದ್ದಾನೆ. ಆಕೆಯ ಕುತ್ತಿಗೆಯಲ್ಲಿದ್ದ ಬಂಗಾರದ ತಾಳಿ ಸರವನ್ನು ಕಿತ್ತುಕೊಂಡು ಓಡಿ ಹೋಗಿರುತ್ತಾನೆಂದು ಮಹಿಳೆಯು ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣ ಬೇಧಿಸಿದ ತನಿಖಾ ತಂಡ
ಪ್ರಕರಣದಲ್ಲಿ ಆರೋಪಿ ಮತ್ತು ಬಂಗಾರದ ಸರದ ಪತ್ತೆಗಾಗಿ ಎಸ್.ಪಿ. ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಭದ್ರಾವತಿ ಪೊಲೀಸ್ ಉಪಾಧೀಕ್ಷಕ .ಆರ್. ನಾಗರಾಜ್ ಮೇಲ್ವಿಚಾರಣೆಯಲ್ಲಿ ಭದ್ರಾವತಿ ನಗರದ ವೃತ್ತ ಸಿಪಿಐ ಜೆ.ಶ್ರೀಶೈಲ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿ ನ್ಯೂಟೌನ್ ಠಾಣೆ ಪಿಎಸ್ಐ ಟಿ.ರಮೇಶ್ ಸಿಬ್ಬಂದಿ ನವೀನ್, ಮಲ್ಲಿಕಾರ್ಜುನ, ರಾಕೇಶ್, ಗೀರೀಶ್, ವಿನೋದ್ ಅವರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದೆ.