Power cut | ಶಿವಮೊಗ್ಗದಲ್ಲಿ ಡಿ.16ರಂದು ಕರೆಂಟ್ ಇರಲ್ಲ, ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?

POWER CUT 1

 

 

ಸುದ್ದಿ‌‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಶ್ರೀಕಂಠಪುರ, ವೀರಾಪುರ, ಹೊಸಕೊಪ್ಪ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

READ | ಶಿವಮೊಗ್ಗದಿಂದ ಸಂಚರಿಸುವ ರೈಲುಗಳು ಭಾಗಶಃ‌ ರದ್ದು, ಯಾವೆಲ್ಲ ರೈಲುಗಳಿಗೆ ಅನ್ವಯ?

SHIMOGA: ಶಿವಮೊಗ್ಗ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಮಲ್ಲಾಪುರದಲ್ಲಿ ತ್ರೈಮಾಸಿಕ ಕೆಲಸ ನಿರ್ವಹಣೆ ಇರುವುದರಿಂದ ಕೆಳಕಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಡಿ. 16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆನವೇರಿ, ಮೈದೊಳಲು, ನಿಂಬೆಗೊಂದಿ, ಎಸ್.ಕೆ ಹಳ್ಳಿ, ಗುಡುಮ ಘಟ್ಟ, ಮಂಗೋಟೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!