ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ (K.J. George) ಅವರು ಫೆ.3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.3 ರ ಬೆಳಗ್ಗೆ 11.05 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11.20 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವರು. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳೊಂದಿಗೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ವಿಷಯಗಳಿಗೆ ಸಂಬಂಧಿಸಿದಂತೆ ಸಭೆ ನಡೆಸುವರು. ಮಧ್ಯಾಹ್ನ 1ಕ್ಕೆ ಜಿಲ್ಲಾ ಕಾಂಗ್ರೇಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. 2.30ಕ್ಕೆ ಜೆ.ಎಲ್.ಆರ್. ಜೋಗ-ಕಾರ್ಗಲ್‍ಗೆ ತೆರಳಲಿದ್ದಾರೆ. ಸಂಜೆ 4.30 ರಿಂದ 6.30ರವರೆಗೆ ಶರಾವತಿ ಪವರ್ ಹೌಸ್‍ಗೆ ಭೇಟಿ ನೀಡಿ ಪಿ.ಎಚ್.ಎಸ್.ಪಿ. ಯೋಜನೆಯ ಅನುಷ್ಠಾನ ಬಗ್ಗೆ ಚರ್ಚೆ ಮಾಡಲಿದ್ದಾರೆ ಹಾಗೂ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.