ಸುದ್ದಿ ಕಣಜ.ಕಾಂ ಶಿವಮೊಗ್ಗ
(COURT NEWS) SHIVAMOGGA: ತಾಲೂಕಿನ 73 ವರ್ಷದ ವೃದ್ಧನೊಬ್ಬ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಧಿಸಿದೆ.
READ | ಟ್ವಿಸ್ಟ್ ಇರ್ಫಾನ್ ಕೊಲೆ, ಆರು ಜನರಿಗೆ ಜೀವಾವಧಿ ಶಿಕ್ಷೆ, ಇಲ್ಲಿದೆ ಕೇಸ್ ವಿವರ
2023ನೇ ಸಾಲಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376 (ಎ) (ಬಿ), 323, 506 ಮತ್ತು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಆರ್.ಎಲ್.ಲಕ್ಷ್ಮಿಪತಿ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಸಂತ್ರಸ್ತೆಗೆ ₹6 ಲಕ್ಷ ಪರಿಹಾರ
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜಿ.ಎಸ್.ಮೋಹನ್ ಅವರು 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ (life imprisonment) ಮತ್ತು ₹2,50,000 ದಂಡ, ದಂಡದ ಮೊತ್ತದಲ್ಲಿ ₹2 ಲಕ್ಷ ಮತ್ತು ಸರ್ಕಾರದಿಂದ ₹6 ಲಕ್ಷ ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ಆದೇಶಿಸಲಾಗಿದೆ. ಸರ್ಕಾರಿ ಅಭಿಯೋಜಕರವರು ಎಚ್.ಆರ್. ಶ್ರೀಧರ್ ವಾದ ಮಂಡಿಸಿದ್ದರು.