Sandalwood | ಮಾಹಿತಿ ಸಿಕ್ಕಿದ್ದೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶಾಕ್

TUNGA NAGAR POLICE STATION

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
(SANDALWOOD )SHIVAMOGGA: ಉಂಬ್ಳೆಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ ಅಕ್ರಮವಾಗಿ ಶ್ರೀಗಂಧ ಮರದ‌ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಗಳನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ.
ಜೆಪಿ ನಗರದ ಇಮ್ದಾದ್ ಖಾನ್ (42), ಆರ್ ಎಂಎಲ್ ನಗರದ ಸಿದ್ದಿಕ್ ಭಾಷಾ ಅಲಿಯಾಸ್ ಸಿದ್ದು(30), ಇಂದಿರಾನಗರದ ಫೈರೋಜ್ ಖಾನ್ ಅಲಿಯಾಸ್ ಗಿಡ್ಡು(34) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿತರಿಂದ ಅಂದಾಜು ₹58,000 ಮೌಲ್ಯದ 14.5 ಕೆ.ಜಿ ತೂಕದ ಶ್ರೀ ಗಂಧದ ತುಂಡುಗಳು ಮತ್ತು ಕೃತ್ಯಕ್ಕೆ ಬಳಸಿದ ಆಲ್ಟೋ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ.

READ | ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ಸ್ಥಾನ

ಮಾಹಿತಿ ಲಭಿಸಿದ್ದೇ ದೌಡು
ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್.ಪಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ. ಕಾರ್ಯಪ್ಪ ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಡಿವೈಎಸ್.ಪಿ ಬಾಬು ಆಂಜನಪ್ಪ, ತುಂಗಾನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಮೇಲ್ವಿಚಾರಣೆಯಲ್ಲಿ ಪಿಎಸ್ಐ ಶಿವಪ್ರಸಾದ್ ನೇತೃತ್ವದಲ್ಲಿ ಸಿದ್ದಪ್ಪ, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ಹರೀಶ್ ನಾಯ್ಕ್, ನಾಗಪ್ಪ, ಲಂಕೇಶ್, ಹರೀಶ್, ಜಯ್ಯಪ್ಪ, ರಮೇಶ್ ಅವರುಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿರುತ್ತದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!